ಕಾಪು : ಸೆಪ್ಟೆಂಬರ್ 25: ದೃಶ್ಯ ನ್ಯೂಸ್ : ಕಾಪು ವಿಧಾನಸಭಾ ಕ್ಷೇತ್ರದ ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಗತಿನಗರದಲ್ಲಿ “ಕೇಂದ್ರೀಯ ವಿದ್ಯಾಲಯ ಉಡುಪಿ” ಇದರ ನೂತನ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಶಿಫಾರಸ್ಸಿನ ಮೇರೆಗೆ 25 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಂಕುಸ್ಥಾಪನೆಯನ್ನು ಇಂದು ನಡೆಯಿತು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು, ಸಂಸದರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯತೀಶ್ ಕುಮಾರ್, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಕೇಂದ್ರೀಯ ವಿದ್ಯಾಲಯ ಸಂಘಟನೆ ಪ್ರಾದೇಶಿಕ ಕಚೇರಿ ಬೆಂಗಳೂರಿನ ಉಪ ಆಯುಕ್ತರಾದ ಧರ್ಮೇಂದ್ರ ಪಟ್ಲೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.