ಉಡುಪಿ :ಸೆಪ್ಟೆಂಬರ್ 25: ದೃಶ್ಯ ನ್ಯೂಸ್ : ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಡಾ.ಪ್ರಸನ್ನ ಎಚ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್, ಉಪವಿಭಾಗಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.