🚫9ಮಂದಿ ಆರೋಪಿಗಳು ಪೊಲೀಸ್ ವಶಕ್ಕೆ
ಶಿವಮೊಗ್ಗ: ಸೆಪ್ಟೆಂಬರ್ 25: ದೃಶ್ಯ ನ್ಯೂಸ್ : ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಹಲ್ಲೆ ಹಾಗೂ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಭತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪವನ್ , ಮಂಜುನಾಥ್, ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ್, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಪವನ್ ಮತ್ತು ಕಿರಣ್ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ರಾತ್ರಿ ನೇತಾಜಿ ಸರ್ಕಲ್‌ನಲ್ಲಿ ಗಲಾಟೆಯಾಗಿತ್ತು. ಗಲಾಟೆ ವೇಳೆ ಪವನ್ ಮತ್ತು ಆತನ ಜೊತೆಗಿದ್ದವರು, ಕಿರಣ್ ಮತ್ತು ಆತನ ಸ್ನೇಹಿತರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದರು. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರೆಲ್ಲರನ್ನು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಈ ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದು ಕೆಲವೇ ಹೊತ್ತಿನಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.