ಮಂಗಳೂರು : ಕಣ್ಣೂರು ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ಮಧ್ಯರಾತ್ರಿ ಸುಮಾರಿಗೆ ದಾಳಿ ನಡೆಸಿದ್ದಾರೆ.ದಾಳಿ ವೇಳೆ ಆರೋಪಿಗಳು ಓಡಿ ಹೋಗಿದ್ದಾರೆ.
5 ಟಿಪ್ಪರ್ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಬಿ ಘಟಕದ ಎಎಸ್‌ಐ ಮೋಹನ್ ಮತ್ತು ಸಿಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.