ಕಾಪು : ಸೆಪ್ಟೆಂಬರ್ 26: ದೃಶ್ಯ ನ್ಯೂಸ್ : ಜಿಲ್ಲಾ ಪಂಚಾಯತ್ ಉಡುಪಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕಾಪು, ದಕ್ಷಿಣ ಕನ್ನಡ ಸರಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಇಂದು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿಯ ಮನೆ ಯೊಂದರಲ್ಲಿ ಹಮ್ಮಿಕೊಳ್ಳಲಾದ “ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ” ವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಗೋಪೂಜೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಕಾರ್ಯಕ್ರಮವನ್ನು ಆಯೋಜಿಸಿದ ಸಂಘ ಸಂಸ್ಥೆಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಗೋವಿನ ರಕ್ಷಣೆ ಮತ್ತು ಸೇವೆ ಮಾಡುವವರನ್ನು ಭಗವಂತ ಎಂದಿಗೂ ಕೈಬಿಡುದಿಲ್ಲ ಎಂದರು.
ಈ ಸಂದರ್ಭದಲ್ಲಿ ಕೆ.ಎಂ.ಎಫ್ ನ ದಿವಾಕರ್ ಶೆಟ್ಟಿ, ಪ್ರಶಾಂತ್, ಡಾ. ವಿಜಯ್ ಕುಮಾರ್, ಡಾ. ಅರುಣ್ ಮೊದಲಾದವರು ಉಪಸ್ಥಿತರಿದ್ದರು.