ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲೈ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗದಲ್ಲಿ ಕೋಣನಕೆರೆಯ ಸರ್ಕಾರಿ ಗಿರಿಜನ ಆಶ್ರಮ ಶಾಲೆಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಕ್ಕಳೊಂದಿಗೆ ಸಂವಾದ ನಡೆಸಿ, ಊಟದ ಗುಣಮಟ್ಟ, ಗ್ರಂಥಾಲಯ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತು ಅಧಿಕಾರಿಗಳು ಜತೆಗಿದ್ದರು.