ಕುಂದಾಪುರ : ಸೆಪ್ಟೆಂಬರ್ 27: ದೃಶ್ಯ ನ್ಯೂಸ್ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿರಿಯಾರ ಬ್ರಹ್ಮಾವರ ವಲಯ ಇದರ ವಿವೇಕ ಕೊಠಡಿ ಉದ್ಘಾಟನಾ ಸಮಾರಂಭ ಇಂದು ನಡೆಯಿತು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ. ಕಿರಣ್ ಕುಮಾರ್ ಕೊಡ್ಗಿಯವರು ವಿವೇಕ ಕೊಠಡಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಸದ್ರಿ ಈ ಕಾರ್ಯಕ್ರಮದಲ್ಲಿ ಶಿರಿಯಾರ ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಸುಧೀರ್ ಶೆಟ್ಟಿ, ಉಪಾಧ್ಯಕ್ಷರಾದ ಶ್ರೀಮತಿ ಅಮಿತಾ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರದೀಪ್ ಬಲ್ಲಾಳ್, ಉದ್ಯಮಿ ಶ್ರೀಧರ್ ಶೆಟ್ಟಿ ಮೊಳಹಳ್ಳಿ ಹಿರಿಯವರಾದ ಆನಂದ ಮರಕಲ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಲಕ್ಷ್ಮಣ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ದಿನಕರ ಕಾಂಚನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು, ರಿಕ್ಷಾ ಚಾಲಕರ ಮತ್ತು ಮಾಲಕರು ಶಿರಿಯಾರ, ಶಿರಿಯಾರ ಗ್ರಾಂ.ಪಂಚಾಯತ್ ನ ಸದಸ್ಯರು, ಶಾಲಾ ಮಕ್ಕಳ ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.