ಉಡುಪಿ : ಸೆಪ್ಟೆಂಬರ್ 27: ದೃಶ್ಯ ನ್ಯೂಸ್ : ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ ಉಡುಪಿ, ನಗರ ಸಭೆ ಉಡುಪಿ, ಉಡುಪಿ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ “ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು TOURISM & GREEN INVESTMENTS” ಎಂಬ ಸಂದೇಶದೊಂದಿಗೆ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2023” ಕಾರ್ಯಕ್ರಮವನ್ನು ಇಂದು ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ.ಅರುಣ್ ಕೆ, ನಗರ ಸಭೆಯ ಪೌರಾಯುಕ್ತರಾದ ರಾಯಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ಸಿ.ಯು, ಕರಾವಳಿ ಪ್ರವಾಸೋದ್ಯಮ ಸಂಘಟನೆ ಅಧ್ಯಕ್ಷರಾದ ಮನೋಹರ್ ಶೆಟ್ಟಿ, ಪ್ರಾಂಶುಪಾಲರಾದ ಡಾ. ಶೆಫ್ ಕೆ. ತಿರು ಮೊದಲಾದವರು ಉಪಸ್ಥಿತರಿದ್ದರು.