ಉಡುಪಿ :ಮಲ್ಪೆ ಕೊಡವೂರು ಬಳಿಯ ದಾಮೋದರ್ ಅವರ ಪುತ್ರಿ 5ನೇ ತರಗತಿ ಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 12 ವರ್ಷದ ದೃಶ್ಯ ನರ ಸಂಬಂಧಿ ಕಾಯಿಲೆಗೆ ಒಳಗಾಗಿ ಸಾವನ್ನಪ್ಪಿದ್ದಾರೆ.
ಮಂಗಳವಾರ ರಾತ್ರಿ ಔಷಧ ಸೇವಿಸಿ ಮಲಗಿದ್ದ ಬಾಲಕಿ ಬೆಳಗ್ಗೆ ಮಾತನಾಡದ ಸ್ಥಿತಿಯಲ್ಲಿದ್ದರು ಎನ್ನಲಾಗಿದೆ ಕೂಡಲೇ ಉಡುಪಿಯ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.