ಉಡುಪಿ : ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.ಶುಕ್ರವಾರ ಕರ್ನಾಟಕ ಬಂದ್ ಇದ್ದರೂ ಕೂಡ , ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಜನ ಜೀವನ ಬಹುತೇಕ ಎಂದಿನಂತೆ ಇರಲಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ…
ಕನ್ನಡ ಸಂಘಟನೆಗಳು ರಾಜ್ಯಮಟ್ಟದಲ್ಲಿ ಬಂದ್ ಗೆ ಕರೆ ನೀಡಿದ್ದು ಕರಾವಳಿ ಭಾಗದಲ್ಲಿ ಮಾತ್ರ ಈ ಬಂದ್ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ.
ಈ ಬಗ್ಗೆ ಖಾಸಗಿ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಹೇಳಿಕೆ ನೀಡಿದ್ದು, ಬಂದ್ ಗೆ ಯಾವುದೇ ರೀತಿಯ ಸಹಕಾರ ನೀಡಲ್ಲ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಈಗಾಗಲೇ ಮಾಹಿತಿ ನೀಡಿದ್ದಾರೆ.ಉಡುಪಿಯಲ್ಲಿಯೂ ಕೂಡ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಬಸ್ಸುಗಳು ಎಂದಿನಂತೆ ಸಂಚರಿಸಲಿದ್ದು ಹೆಚ್ಚಿನ ಬಂದ್ ನ ಪರಿಣಾಮ ಇರುದಿಲ್ಲ.