ಉಡುಪಿ :ಸೆಪ್ಟೆಂಬರ್ 29: ದ್ರಶ್ಯ ನ್ಯೂಸ್ :ಜಿಲ್ಲೆಯ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಕಳೆದ ಎರಡು ದಿನಗಳಿಂದ ಕಟ್ಟಡ ಸಾಮಗ್ರಿ ಸಾಗಾಟ ಬಂದ್ ಮೂಲಕ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಡಳಿತ ಮತ್ತು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ ನಡೆಯಿತು
ಜಿಲ್ಲಾಧಿಕಾರಿ ಶ್ರೀಮತಿ ಕೆ. ವಿದ್ಯಾ ಕುಮಾರಿ, ಶಾಸಕರಾದ ಶ್ರೀ ವಿ. ಸುನೀಲ್ ಕುಮಾರ್, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀ ಕಿರಣ್ ಕುಮಾರ್ ಕೊಡ್ಗಿ, ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಗಣಿ ಹಾಗೂ ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಲಾರಿ ಮಾಲೀಕರಿಗೆ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳಿಗೆ ಜಿ ಪಿ ಎಸ್ ಅಳವಡಿಕೆಗೆ ಅಕ್ಟೋಬರ್ 7 ರವೆರೆಗೆ ಕಾಲಾವಕಾಶ ನೀಡಲು ನಿರ್ಧರಿಸಲಾಯಿತು