ಉಡುಪಿ:ಸೆಪ್ಟೆಂಬರ್ 29:ದ್ರಶ್ಯ ನ್ಯೂಸ್ : ಆದರ್ಶ ಆಸ್ಪತ್ರೆ ಹಾಗೂ ಆದರ್ಶ ಚಾರಿಟೇಬಲ್ ಟ್ರಸ್ಟ್ ರಿ. ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಹೃದಯ ದಿನಾಚರಣೆ ಸಪ್ತಾಹ ಆಯೋಜಿಸಿಲಾಗಿತ್ತು
ಕಾರ್ಯಕ್ರಮ ದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೃದಯದ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ವೈದ್ಯರ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್, ಹೃದ್ರೋಗ ತಜ್ಞರಾದ ಡಾ. ವಿಶು ಕುಮಾರ್ ಬಿ., ಡಾ. ಶ್ರೀಕಾಂತ ಕೃಷ್ಣ, ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಮಲ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.