ಬೆಂಗಳೂರು : ಸೆಪ್ಟೆಂಬರ್ 29: ದೃಶ್ಯ ನ್ಯೂಸ್ : ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಣಿಪಾಲ್ ಆಸ್ಪತ್ರೆ ಹಾಗೂ ವಿಜಯಕರ್ನಾಟಕ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಸೆಮಿನಾರ್ ನಲ್ಲಿ ಭಾಗವಹಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಸ್.ಓ.ಎಸ್ QR ಕೋಡ್ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಜನರಿಗೆ ತ್ವರಿತ ಗತಿಯಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವುದು ನಮ್ಮ ಕರ್ತವ್ಯ. ಇದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಈ ಎಸ್.ಓ.ಎಸ್ QR ಕೋಡ್ ಗೆ ಚಾಲನೆ ನೀಡುವ ಕಾರ್ಯಕ್ಕೆ ಮುಂದಾಗಿರುವ ಎರಡೂ ಸಂಸ್ಥೆಯವರಿಗೆ ನನ್ನ ಅಭಿನಂದನೆಗಳು.
ಕಾರ್ಯಕ್ರಮದಲ್ಲಿ ಮಾನ್ಯ ಗೃಹಸಚಿವರಾದ ಶ್ರೀ ಜಿ. ಪರಮೇಶ್ವರ್, ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಸುದರ್ಶನ್ ಬಳ್ಳಾಲ್, ವಿಜಯ ಕರ್ನಾಟಕ ಪತ್ರಿಕೆಯ ಮುಖ್ಯ ಸಂಪಾದಕರಾದ ಶ್ರೀ ವಿ.ಕೆ ಸುದರ್ಶನ್ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.