ಸುರತ್ಕಲ್, 30 ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜ ಗುಜ್ಜಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ ಘಟನೆ ನಡೆದಿದೆ.
ಕಾರು ಚಾಲಕ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಪ್ರಯಾಣಿಕ ಮೊಹಮ್ಮದ್ ಫಿಜಾನ್ ಅವರ ತಲೆಯ ಒಳಭಾಗಕ್ಕೆ ಗಂಭೀರವಾದ ಗಾಯವಾಗಿದ್ದು, ಮತ್ತೋರ್ವ ಪ್ರಯಾಣಿಕ ಅನಿರಿಧ್ ನಾಯರ್ ಅವರ ಹಣೆಯ ಮೇಲೆ ಕೂಡ ಗಾಯವಾಗಿದೆ.
ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದ ಶವವನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ.ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.