ಉಡುಪಿ :ಅಕ್ಟೋಬರ್ 01:ದ್ರಶ್ಯ ನ್ಯೂಸ್,:ಪರವಾನಿಗೆ ರಹಿತ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳನ್ನು ಮುಟ್ಟುಗೋಲು ಹಾಕಿ ದಂಡ ವಿಧಿಸಿ ಪ್ರಕರಣ ದಾಖಲಿಸುತ್ತಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಒಕ್ಕೂಟದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ .ಅ.3ರಂದು ಹಮ್ಮಿಕೊಂಡಿರುವ ಉಡುಪಿ ಜಿಲ್ಲೆ ಬಂದ್ ನಿರ್ಧಾರವನ್ನು ಕೈಬಿಡಲಾಗಿದೆ.
ಜಿಲ್ಲೆಗೆ ರಾಜ್ಯಪಾಲರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತು ಜನಸಾಮಾನ್ಯರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಉಡುಪಿ ಜಿಲ್ಲಾ ಬಂದ್ ನಿರ್ಧಾರವನ್ನು ಕೈಬಿಡಲಾಗಿದೆ. ಆದರೆ ನಮ್ಮಮುಷ್ಕರ ಹಾಗೂ ಹೋರಾಟ ಗಳು ಮುಂದುವರೆಯಲಿದೆ ಎಂದು ಒಕ್ಕೂಟದ ಪ್ರಮುಖ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.