ಉಡುಪಿ : ಅಕ್ಟೋಬರ್ 02:ದ್ರಶ್ಯ ನ್ಯೂಸ್ :ಯಕ್ಷಗಾನ ಕಲಾರಂಗ ರಿ. ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣೆ ಕಾರ್ಯಕ್ರಮ ನಡೆಯಿತು
ಸಮಾರಂಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ, ಗಣ್ಯರಾದ ಶ್ರೀ ಆನಂದ ಸಿ. ಕುಂದರ್, ಶ್ರೀ ಪುರುಷೋತ್ತಮ ಶೆಟ್ಟಿ, ಶ್ರೀ ವಿಶ್ವನಾಥ ಶೆಣೈ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಶ್ರೀ ಗಂಗಾಧರ ರಾವ್, ಕಾರ್ಯದರ್ಶಿ ಶ್ರೀ ಮುರಳಿ ಕಡೆಕಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.