ಉಡುಪಿ ನಗರ ಬಿಜೆಪಿ ವತಿಯಿಂದ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜಯಂತಿ ಆಚರಣೆ ಅಂಗವಾಗಿ ಆಯೋಜಿಸಿದ್ದ ಉಡುಪಿ ನಗರ ವ್ಯಾಪ್ತಿಯ ಬಸ್ ನಿಲ್ದಾಣಗಳ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮಹೇಶ್ ಠಾಕೂರ್, ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಪಕ್ಷದ ಮುಖಂಡರಾದ ಶ್ರೀ ರಾಘವೇಂದ್ರ ಕಿಣಿ, ಶ್ರೀ ಮಂಜುನಾಥ ಮಣಿಪಾಲ, ಶ್ರೀಮತಿ ವೀಣಾ ಶೆಟ್ಟಿ, ನಗರ ಸಭಾ ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.