ಶಿವಮೊಗ್ಗ :ಅಕ್ಟೋಬರ್ 03:ಶಿವಮೊಗ್ಗ ಜಿಲ್ಲೆಯ ಶಾಂತಿನಗರದ ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನ ಗೊಂಡು ನಾಲ್ವರು ಗಾಯಗೊಂಡ ಘಟನೆ ನಡೆದ ಬಳಿಕ ಶಿವಮೊಗ್ಗ ಪೊಲೀಸರು ಸುಮಾರು 60 ಮಂದಿಯನ್ನು ನಿನ್ನೆ (ಸೋಮವಾರ) ಬಂಧಿಸಿದ್ದು ಇನ್ನು ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಜಿಲ್ಲೆಯ ಪೂರ್ವ ವಲಯದ ಐಜಿಪಿ ತ್ಯಾಗರಾಜನ್ ಅವರು ಪಟ್ಟಣದಲ್ಲಿ ಪರಿಸ್ಥಿತಿ ಹದಗೆಡದಂತೆ ಕಟ್ಟೆಚ್ಚರ ವಹಿಸಿದ್ದಾರೆ. ವಾಣಿಜ್ಯ ಪ್ರದೇಶಗಳಲ್ಲಿ, ಮುಖ್ಯವಾಗಿ ಗಾಂಧಿ ಬಜಾರ್ ಮತ್ತು ನೆಹರು ರಸ್ತೆಯಲ್ಲಿ ವ್ಯಾಪಾರ ಸಂಸ್ಥೆಗಳು ಬಂದ್ ಆಗಿದ್ದವು. ಯಾವುದೇ ವ್ಯಾಪಾರ ವಹೀವಾಟು ನಡೆದಿಲ್ಲ.
ಇನ್ನೂ ಘಟನೆಗೆ ಕಾರಣವಾದವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಒಟ್ಟು ಸುಮಾರು 24 FIRಗಳು ದಾಖಲಾಗಿವೆ. ಮುಂಜಾಗ್ರತಾ ಕ್ರಮವಾಗಿ ರಾಗಿಗುಡ್ಡದಲ್ಲಿ ಇನ್ನೂ ಕೆಲವು ದಿನಗಳ ಕಾಲ ಪೊಲೀಸ್ ಬಂದೋಬಸ್ತ್, ಬಿಗಿ ಕ್ರಮಗಳು ಜಾರಿಯಲ್ಲಿರಲಿದ್ದು ರಾಗಿಗುಡ್ಡದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.