ಉಡುಪಿ :ಅಕ್ಟೋಬರ್03:ದ್ರಶ್ಯನ್ಯೂಸ್ :ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಲ್ಲೋಟ್ಅವರ ಇಂದಿನ ಉಡುಪಿ ಜಿಲ್ಲಾ ಪ್ರವಾಸವನ್ನು ಅನಿವಾರ್ಯ ಕಾರಣಗಳಿಂದ ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಪಾಲರು ಇಂದು ಕೋಟದಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಆದರೆ ಅನಿವಾರ್ಯ ಕಾರಣಗಳಿಂದ ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.