ಬೆಳಗಾವಿ: ಅಕ್ಟೋಬರ್ 03:ದ್ರಶ್ಯ ನ್ಯೂಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಷದಲ್ಲಿ ಮಾತನಾಡಿದರು.
ಕಾಗಿನೆಲೆ ಕನಕ ಗುರು ಪೀಠದ ಶ್ರೀ ಶ್ರೀ ನಿರಂಜನಾನಂದ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಸೊದ್ದರಾಮಾನಂದ ಸ್ವಾಮೀಜಿ ಹಾಗೂ ಅರ್ಜುನಾಭಾಯಿಪುರಿ ಸ್ವಾಮೀಜಿಯವರುಗಳ ದಿವ್ಯ ಸನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.
ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಮಾವೇಷ ಉದ್ಘಾಟಿಸಿದ ಕಾರ್ಯಕ್ರಮವನ್ನು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ ಅಧ್ಯಕ್ಷರಾದ ಮಾಜಿ ಮಂತ್ರಿ ಹೆಚ್.ವಿಶ್ವನಾಥ್ ಅವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿಯ ರಾಜ್ಯ ಸಚಿವ ಫಗ್ಗಾನ್ ಸಿಂಗ್ ಕುಲಾಸ್ತೆ, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗೋವಾ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಚಂದ್ರಕಾಂತ್ ಬಾಬು ಕಾವಲೇಕರ್, ಮಹಾರಾಷ್ಟ್ರ ರಾಜ್ಯದ ಮಾಜಿ ಸಚಿವ ಮಹದೇವ್ ಜನಕಾರ್, ದತ್ತಾತ್ರೇಯ ಭರ್ನೆ, ರಾಮ ಶಂಕರ್ ಶಿಂದೆ, ಶೆಫರ್ಡ್ ಇಂಟರ್ ನ್ಯಾಷನಲ್ ಉಪಾಧ್ಯಕ್ಷ ಹೆಚ್.ಎಂ.ರೇವಣ್ಣ, ಆಂಧ್ರ. ಪ್ರದೇಶ ರಾಜ್ಯದ ಸಚಿವೆ ಕೆ.ವಿ.ಉಷಾಶ್ರೀ ಚರಣ್, ಮಾತಾ ಅಹಿಲ್ಯಾಬಾಯಿ ಹೋಳ್ಕರ್ ಅವರ ಮೊಮ್ಮಗ ಭೂಷಣ್ ರಾಜೆ ಹೋಳ್ಕರ್, ಗುಜರಾತ್ ರಾಜ್ಯದ ಮುಖಂಡರಾದ ಸಾಗರ್ ರಾಯ್ಕ ಸೇರಿ 60 ಕ್ಕೂ ಹೆಚ್ಚು ಮಂದಿ ನಾನಾ ರಾಜ್ಯಗಳ ಕುರುಬ ಮತ್ತು ಗೋಪಾಲಕ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು.