ಉಡುಪಿ : ಅಕ್ಟೋಬರ್ 04:ದ್ರಶ್ಯ ನ್ಯೂಸ್: ವಂಡ್ಸೆ ಗ್ರಾಮದ ನಿವಾಸಿ ಅಣ್ಣಪ್ಪ(30) ಎಂಬುವವರು ಸೆ. 28ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ಅಥವಾ ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ಮೊ. ನಂ. 9480805434 ಅನ್ನು ಸಂಪರ್ಕಿಸಬಹುದು ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.