ಉಡುಪಿ : ಅಕ್ಟೋಬರ್ 05:ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಅಕ್ಟೋಬರ್ 10ರಂದು ಬೆಳಗ್ಗೆ 10:30ರಿಂದ ನೇರ ಸಂದರ್ಶನ ನಡೆಯಲಿದೆ.
ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹೆರಿಗೆ ತಜ್ಞರು -03 ಹುದ್ದೆ (ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ), ವೈದ್ಯಾಧಿಕಾರಿಗಳು-05 ಹುದ್ದೆ (ಕುಂದಾಪುರದ ಟಿ.ಟಿ.ರೋಡ್‌ನ ನಮ್ಮ ಕ್ಲಿನಿಕ್ ಹಾಗೂ ಖಾರ್ವಿಕೇರಿ ನಮ್ಮ ಕ್ಲಿನಿಕ್, ಕಾರ್ಕಳ ಮರೀನಾಪುರದ ನಮ್ಮ ಕ್ಲಿನಿಕ್, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಉಡುಪಿಯ ಜಿಲ್ಲಾ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಯಂಗ್ ಹಿಯರಿಂಗ್ ಇಂಪೈರಿಡ್ ಚಿಲ್ದ್ರನ್ ಇನ್‌ಸ್ಪೆಕ್ಟರ್ -01 ಹುದ್ದೆ (ಜಿಲ್ಲಾ ಆಸ್ಪತ್ರೆ) ಹಾಗೂ ಎಲ್.ಹೆಚ್.ವಿ.-01 (ಉಡುಪಿಯ ನಗರ ಆರೋಗ್ಯ ಕೇಂದ್ರ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದೆ
ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ