ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು, ವದಂತಿ ಹಬ್ಬಿಸದಂತೆ ತಿಮ್ಮಕ್ಕನವರ ದತ್ತುಪುತ್ರ ಉಮೇಶ್ ಮನವಿ ಮಾಡಿದರು.
ತಿಮ್ಮಕ್ಕನವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದೆಲ್ಲಾ ವದಂತಿ ನಂಬಬೇಡಿ ಎಂದಿದ್ದಾರೆ.
ಸದ್ಯ ಸಾಲುಮರದ ತಿಮ್ಮಕ್ಕ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು.
ಆಸ್ಪತ್ರೆಯಲ್ಲಿರುವ ತಿಮ್ಮಕ್ಕನವರ ವಿಡಿಯೋವನ್ನು ಉಮೇಶ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡು, ಅವರ ಆರೋಗ್ಯದ ಬಗ್ಗೆ ಹರಡುತ್ತಿರುವ ವದಂತಿಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ.
ಎಲ್ಲಿಯೂ ಸುಳ್ಳು ಸುದ್ದಿ ಹರಡದಂತೆ ಈ ಮೂಲಕ ಮನವಿ ಮಾಡಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಲಳುತ್ತಿರುವ ತಿಮ್ಮಕ್ಕನವರು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ