ಬೆಂಗಳೂರು: ಸೆ.25ರಂದು ರಾಜ್ಯಾಧ್ಯಂತ ಏಕಕಾಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲೂಕು ಮಟ್ಟದಲ್ಲೂ ಜನತಾ ದರ್ಶನ ಕಾರ್ಯಕ್ರಮಕ್ಕೆ ಸೂಚಿಸಲಾಗಿತ್ತು. ಈ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರಲ್ಲಿ ಅಕ್ಟೋಬರ್.9ರಂದು ಜನತಾ ದರ್ಶನ ಕಾರ್ಯಕ್ರಮ ನಿಗದಿ ಪಡಿಸಲಾಗಿತ್ತು.
ಆದ್ರೇ ಅನಿವಾರ್ಯ ಕಾರಣಗಳಿಂದ ಈ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.ಈ ಕುರಿತಂತೆ ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 09-10-23 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಜನತಾ ದರ್ಶನದ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು.ಅಡಚಣೆಗಾಗಿ ವಿಷಾದಿಸುತ್ತೇವೆ ಎಂದು ತಿಳಿಸಿದೆ.