ಬೆಂಗಳೂರು : ಅಕ್ಟೋಬರ್ 6: ದೃಶ್ಯ ನ್ಯೂಸ್ : ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಕದಳಿ ಮಹಿಳಾ ಸಮಾವೇಶ ಹಾಗೂ ಕದಳಿ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ಶುಕ್ರವಾರ ಬೆಂಗಳೂರಿನಲ್ಲಿ ನಡೆಯಿತು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಪ್ರಸಿದ್ಧ ನೃತ್ಯಗಾರ್ತಿ ವೈಜಯಂತಿ ಕಾಶಿ, ಪ್ರಸಿದ್ಧ ಗಾಯಕರಾದ ಸಂಗೀತಾ ಕಟ್ಟಿ ಕುಲಕರ್ಣಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಅಪ್ಪರಾವ ಅಕ್ಕೋಣೆ, ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ವಿ.ನಾಗರಾಜಮೂರ್ತಿ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷರಾದ ಪ್ರಮೀಳಾ ಗರಡಿ ಮೊದಲಾದವರು ಉಪಸ್ಥಿತರಿದ್ದರು.