ಕುಂದಾಪುರ: ಅಕ್ಟೋಬರ್: 06: ದೃಶ್ಯ ನ್ಯೂಸ್ : ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್ ಬಳಿ ರವಿವಾರ ಸಂಜೆ ಚೂರಿ ಇರಿದು ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್ (42) ಅಲಿಯಾಸ್ ಬನ್ಸ್ ರಾಘು ಎನ್ನುವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಇಂದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಶಿವಮೊಗ್ಗ ಮೂಲದ ಶಫಿವುಲ್ಲಾ (40) ಹಾಗೂ ಇಮ್ರಾನ್ (43) ಬಂಧಿತ ಆರೋಪಿಗಳು.
ಕುಂದಾಪುರ ಠಾಣೆ ನಿರೀಕ್ಷಕ ನಂದಕುಮಾರ್, ಅಪರಾಧ ವಿಭಾಗದ ಪಿಎಸ್ಐ ಪ್ರಸಾದ್, ಪಿಎಸ್ಐ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಮೊದಲಿಗೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು 2ನೇ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.