ಚಿತ್ರದುರ್ಗ : ಅ.06: ದೃಶ್ಯ ನ್ಯೂಸ್ : ರಾಜ್ಯದಲ್ಲಿ ಯಾವುದೇ ಹೊಸ ಮದ್ಯದಂಗಡಿಗನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಶುಕ್ರವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ ನೀಡಿದ್ದಾರೆ, ಆದರೆ ನಾವು ತೆರೆಯುವುದಿಲ್ಲ ಎಂದು ಹೇಳಿದರು.
ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಬಿಜೆಪಿಯವರು.ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು ಸಾಲ ಮಾಡಿರಲಿಲ್ಲ ಎಲ್ಲಾ ಹಾಳು ಮಾಡಿ ಈಗ ನಮಗೆ ಹೇಳುತ್ತಾರೆ ಅವರಿಗೆ ನಮ್ಮ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೇ ಎಂದು ಕಿಡಿಕಾರಿದರು