ಬೈಂದೂರು :ಅಕ್ಟೋಬರ್ 07:ದ್ರಶ್ಯ ನ್ಯೂಸ್ :ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇವರ ಸಹಯೋಗದಲ್ಲಿ ಬೈಂದೂರು ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಎರಡು ದಿನಗಳ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಕ್ರೀಡಾಪಟು ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಮಂಜುನಾಥ್ ಮರಾಠಿ ಅವರ ಸಾಧನೆ ಗುರುತಿಸಿ, ಸನ್ಮಾನಿಸಿ ಗೌರವಿಸಲಾಯಿತು.
ರಾಷ್ಟ್ರೀಯ ಕ್ರೀಡಾಪಟು ಮಂಜುನಾಥ ಮರಾಠಿ ಮಾತನಾಡಿ, ಕ್ರೀಡೆಯಿಂದ ನಮ್ಮ ಜೀವನ ಸಾಕಷ್ಟು ಬದಲಾಗುತ್ತದೆ. ನಾವು ಆರೋಗ್ಯವಂತಾಗಿರಲು ಕ್ರೀಡೆ ಬಹಳ ಮುಖ್ಯ, ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರು ನೀಡುವ ಪ್ರೋತ್ಸಾಹದಿಂದ ನಾನು ರಾಷ್ಟçಮಟ್ಟದಲ್ಲಿ ಕ್ರೀಡಾಪಟು ಆಗಲು ಸಾಧ್ಯವಾಗಿದೆ, ನನಗೆ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಪ್ರೋತ್ಸಾಹಿಸಿ ನನ್ನೆಲ್ಲಾ ದೈಹಿಕ ಶಿಕ್ಷಕರು ಹಾಗೂ ನನ್ನ ಹೆತ್ತವರಿಗೆ ವಂದಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಮತ್ತು ಸರ್ವ ಸದಸ್ಯರು ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದೈಹಿಕ ಶಿಕ್ಷಕರು ಹಳೆ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರು ಊರ ಪರಊರ ಗ್ರಾಮಸ್ಥರು ಉಪಸ್ಥಿತರಿದ್ದರು.