ಹೊಸದಿಲ್ಲಿ: ಅಕ್ಟೋಬರ್: 09: ದೃಶ್ಯ ನ್ಯೂಸ್ : ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಈ ಕುರಿತು ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ನವೆಂಬರ್ 7ರಂದು ಮಿಜೋರಾಂ ವಿಧಾನಸಭೆ ಚುನಾವಣೆ ನಡೆಯಲಿದೆ. ಛತ್ತೀಸ್ ಗಡದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 7 ಮತ್ತು 17ರಂದು ಮತದಾನ ನಡೆಯಲಿದೆ. ಮಧ್ಯ ಪ್ರದೇಶದಲ್ಲಿ ನವೆಂಬರ್ 17, ರಾಜಸ್ಥಾನದಲ್ಲಿ ನವೆಂಬರ್ 23ರಂದು ಮತ್ತು ತೆಲಂಗಾಣದಲ್ಲಿ ನವೆಂಬರ್ 30ರಂದು ಚುನಾವಣೆ ನಿಗದಿಯಾಗಿದೆ. ಈ ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ.