ಉಡುಪಿ, ಅಕ್ಟೋಬರ್ 10: ದೃಶ್ಯ ನ್ಯೂಸ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಅಭಿಯಾನದ ಮೂರನೇ ಸುತ್ತು ಜಿಲ್ಲೆಯಲ್ಲಿ ಅ. 9 ರಿಂದ 14 ರ ವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್, ಇಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೆರವೇರಿಸಿ, ಲಸಿಕೆ ವಂಚಿತ ಮಕ್ಕಳು ದಡಾರ, ರುಬೆಲ್ಲಾ ಇನ್ನಿತರ ನಿಗದಿತ ಲಸಿಕೆ ಪಡೆದು ದಡಾರ ರುಬೆಲ್ಲಾ ನಿವಾರಣೆಯತ್ತ ದಿಟ್ಟ ಹೆಜ್ಜೆಯನ್ನಿಟ್ಟು ಉಡುಪಿ ಜಿಲ್ಲೆಯನ್ನು ಆರೋಗ್ಯವಂತ ಜಿಲ್ಲೆಯನ್ನಾಗಿಸಲು ಪ್ರಯತ್ನಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಿ.ಡಿ.ಪಿ.ಐ ಗಣಪತಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮ್‌ರಾವ್ ಕೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ವೇಣುಗೋಪಾಲ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಡಿಪಿಸಿ-ಆರ್.ಸಿ.ಹೆಚ್, ಎಮ್&ಇ ವ್ಯವಸ್ಥಾಪಕರು, ವಿಸಿಸಿಎಮ್, ಐ.ಎಫ್.ವಿ ಮತ್ತು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಭಾರ ಆರ್.ಸಿ.ಹೆಚ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ವಂದಿಸಿದರು.