⭕️ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟನೆ
ಕೋಟ: ಅಕ್ಟೋಬರ್: 10: ದೃಶ್ಯ ನ್ಯೂಸ್ : ಕೋಟತಟ್ಟು ಗ್ರಾಮ ಪಂಚಾಯತ್, ಕೋಟತಟ್ಟು, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.), ಕೋಟ ಸಹಯೋಗದಲ್ಲಿ ಕೋಟ ಶಿವರಾಮ್ ಕಾರಂತ ಥೀಂ ಪಾರ್ಕ್ ನಲ್ಲಿ “ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾ. ಶಿವರಾಮ ಕಾರಂತ ಹೂಟ್ಟೂರು ಪ್ರಶಸ್ತಿ ಪ್ರದಾನ ಇಂಪನ ಸಂಗೀತ ಸಂಪುಟದ ಸಂಚಲನ” ಕಾರ್ಯಕ್ರಮ ಇಂದು ನಡೆಯಿತು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಖ್ಯಾತ ಶಾಸ್ತ್ರೀಯ ಸಂಗೀತಗಾರರಾದ ಡಾ. ವಿದ್ಯಾಭೂಷಣ ಅವನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಸತೀಶ್ ಕುಂದರ್, ಡಾll ಶಿವರಾಮ ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷರಾದ ಆನಂದ್ ಸಿ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.