ಬೆಳ್ಮಣ್ : ಅ.11: ಕಾರ್ಕಳ ತಾಲೂಕಿನ ಬೆಳ್ಮಣ್ ಬಸ್ ನಿಲ್ದಾಣದ ಬಳಿ ನಿನ್ನೆ ಸಂಜೆ ವೇಳೆ ಬಸ್ ಟೈಮಿಂಗ್ಸ್ ವಿಚಾರದಲ್ಲಿ ಪರಸ್ಪರ ಗಲಾಟೆ ಮಾಡಿ ಹೊಡೆದಾಡಿಕೊಂಡಿದ್ದ ಇಬ್ಬರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಶಾಂತ್ ಮತ್ತು ಸುಂದರ ಎಂಬವರು ಬಸ್ಸಿನ ಟೈಮಿಂಗ್ಸ್ ವಿಚಾರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕರ ಶಾಂತಿ ನೆಮ್ಮದಿಗೆ ಭಂಗವುಂಟು ಮಾಡಿರುವುದಾಗಿ ದೂರಲಾಗಿದೆ.
ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳಾದ ಪ್ರಶಾಂತ್ ಹಾಗೂ ಸುಂದರ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.