ಮಂಗಳೂರು: ಅಕ್ಟೋಬರ್ 11 ಬುಧವಾರ ರಾತ್ರಿ ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ ಸವಾರನ ಮೇಲೆ ಕಾರು ಹರಿದು ಯುವಕ ಮೃತಪಟ್ಟ ಘಟನೆ ನಡೆದಿದೆ.
ಕಾವುರು ನಿವಾಸಿ ಕೌಶಿಕ್ (21) ಮೃತಪಟ್ಟವರು.
ಆಸ್ಪತ್ರೆ ಆವರಣದಿಂದ ಹೊರ ಬರುತ್ತಿದ್ದಂತೆ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿದೆ. ಈ ವೇಳೆ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ