ಮಂಗಳೂರು : ಅಕ್ಟೋಬರ್: 12: ದೃಶ್ಯ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕಡೆಗೆ ಮಿನಿ ಟಿಪ್ಪರ್ ಲಾರಿಯಲ್ಲಿ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳದುಬಂದಿದೆ.
ವಶಕ್ಕೆ ಪಡೆದ ಆರೋಪಿಗಳನ್ನು ಅಫ್ರಿದ್ ಹಾಗೂ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ.
ಎಸ್ಸೈ ಹರೀಶ್ ಸಿಬ್ಬಂದಿಗಳ ಜೊತೆ ಗಸ್ತು ನಿರತರಾಗಿದ್ದ ವೇಳೆ ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕಡೆಗೆ ತೆರಳುತ್ತಿದ್ದ ಮಿನಿ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ 10 ಟನ್ ಮರಳನ್ನು ಆರೋಪಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ತಕ್ಷಣ 11 ಸಾವಿರದ ಮೌಲ್ಯದ ಮರಳು ಮತ್ತು 5 ಲಕ್ಷ ರೂ. ಮೌಲ್ಯದ ಲಾರಿಯನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.