ಸಾಲಿಗ್ರಾಮ : ಅ.13: ದೃಶ್ಯ ನ್ಯೂಸ್ : ಯಾವುದೇ ಪರವಾನಿಗೆ ಇಲ್ಲದೇ ಸಾಲಿಗ್ರಾಮದ ಅಂಗಡಿಯೊಂದರಲ್ಲಿ ದಾಸ್ತಾನಿರಿಸಿದ್ದ 325.66 ಕೆ.ಜಿ. ಪಟಾಕಿಯನ್ನು ಕುಂದಾಪುರ ತಹಶೀಲ್ದಾರ್ ಹಾಗೂ ಕುಂದಾಪುರ ಅಗ್ನಿಶಾಮಕ ಠಾಣಾಧಿಕಾರಿಯವರು ಇಂದು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಉದಯ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು ಈ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ 50,000 ರೂ.ಮೌಲ್ಯದ ಪಟಾಕಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.