ಶಿವಮೊಗ್ಗ: ಅಕ್ಟೋಬರ್: 13: ದೃಶ್ಯ ನ್ಯೂಸ್ : ಪ್ರಚೋದನಕಾರಿ ಭಾಷಣ ಆರೋಪ ಹಿನ್ನಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರಿಂದ ಸುಮೋಟೋ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಮಥುರಾ ಪ್ಯಾರಡೈಸ್ ಹೋಟೆಲ್ ಎದುರು ಗುರುವಾರ ರಾಗಿಗುಡ್ಡ ಗಲಭೆ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹಿಂದೂ ಸಮಾಜ ಇವತ್ತಿನ ತನಕ ಕಾನೂನನ್ನು ಕೈಗೆ ತೆಗೆದುಕೊಂಡಿಲ್ಲ. ಹರ್ಷನ ಕೊಲೆಯಾದಾಗ ನಾವು ಲಾಂಗು, ಮಚ್ಚುಗಳನ್ನು ಹಿಡಿದುಕೊಂಡು ಮುಸಲ್ಮಾನರ ಬೀದಿಗಳಿಗೆ ಹೋಗಿದ್ದರೆ, ಮಾರಿ ಜಾತ್ರೆಯಲ್ಲಿ ಕುರಿ ಕಡಿದು ಹಾಕಿದಂಗೆ ಕಡಿದು ಹಾಕಿ ಬಿಡುತ್ತಿದ್ದೇವು. ಆ ಬದುಕು ನಾವು ಮಾಡಲಿಲ್ಲ. ಈ ದೇಶದಲ್ಲಿರುವ ಹಿಂದುಗಳು ಮುಸಲ್ಮಾನರು ಒಟ್ಟಾಗಿ ಇರಬೇಕೆಂಬ ಆಸೆ ಇದೆ ಆದರೆ ಒಟ್ಟಾಗಿರಲು ಇವರು ಬಿಡುವುದಿಲ್ಲ. ಇಲ್ಲಿರುವ ಹೆಣ್ಣು ಮಕ್ಕಳು ಕಿತ್ತೂರು ರಾಣಿ ಚೆನ್ನಮ್ಮ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ರಕ್ತವನ್ನು ಹಂಚಿಕೊಂಡು ಹುಟ್ಟಿದ್ದಾರೆ. ಅವರ ಸುದ್ದಿಗೆ ಬಂದರೆ ಆ ಹೆಣ್ಣು ಮಕ್ಕಳು ಸುಮ್ಮನೆ ಬಿಡಲ್ಲ ನಿಮ್ಮನ್ನು ಕೊಚ್ಚಿ ಹಾಕುತ್ತಾರೆʼʼ ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎನ್ನಲಾಗಿದೆ.
ಪ್ರಚೋದನಕಾರಿ ಭಾಷಣದ ಮೂಲಕ ಕೋಮು ಭಾವನೆ ಕೆರಳಿಸಿದ್ದಾರೆ ಎಂಬ ಆರೋಪ ಹಿನ್ನಲೆ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 153 ಎ ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.