ಬೆಂಗಳೂರು :ಅಡುಗೆ ಅನಿಲ ಉಚಿತ ಸಂಪರ್ಕಕ್ಕೆ ಪ್ರಧಾನ ಮಂತ್ರಿ ಉಜ್ವಲಾ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ. ಅಡುಗೆ ಅನಿಲ ಸಂಪರ್ಕ ಪಡೆಯದೇ ಅವಕಾಶ ವಂಚಿತರಾಗಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಾರಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಹಕರು ತಮ್ಮ ವ್ಯಾಪ್ತಿಯಲ್ಲಿರುವ ಗ್ಯಾಸ್ ಏಜೆನ್ಸಿಗಳನ್ನು ಸಂಪರ್ಕಿಸಿ ಉಜ್ವಲ್ ಯೋಜನೆಯಡಿ ಅನಿಲ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆಯಬಹುದು
ಗ್ಯಾಸ್ ಸಂಪರ್ಕ ನೀಡುವ ನಾನಾ ತೈಲ ಕಂಪನಿಯ ಗ್ಯಾಸ್ ಏಜೆನ್ಸಿಗಳನ್ನು ಗ್ರಾಹಕರೇ ನೇರವಾಗಿ ಆಯ್ಕೆ ಮಾಡಿಕೊಂಡು ಉಜ್ವಲ್ ಯೋಜನೆಯಡಿ ಸಂಪರ್ಕ ನೀಡುವಂತೆ ಆನ್‌ಲೈನ್ ಮೂಲಕ ಅರ್ಜಿಯೊಂದಿಗೆ ಅಗತ್ಯ ದಾಖಲಾತಿ ಸಲ್ಲಿಸಬೇಕಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮಹಿಳೆಯರು ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ https://www.pmuy.gov.in/ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.. .