ಕಾರ್ಕಳ :ಅಕ್ಟೋಬರ್ 15: ದ್ರಶ್ಯ ನ್ಯೂಸ್ :ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಪರುಶುರಾಮ ಥೀಮ್ ಪಾರ್ಕ್ ನಲ್ಲಿದ್ದ ಪರಶುರಾಮ ಮೂರ್ತಿ ಮಾಯವಾದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿದೆ.
ಪರಶುರಾಮ ಥೀಂ ಪಾರ್ಕ್ ಗೇ ಭೇಟಿ ನೀಡಿದ ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮಾತನಾಡುತ್ತಾ, ಬೈಲೂರು ಪರಶುರಾಮ ಥೀಮ್ ಪಾರ್ಕಿನಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡಿದ್ದೇವೆ ಎಂದು ಹೇಳಿ ಪೈಭರ್ ಪ್ರತಿಮೆ ನಿರ್ಮಿಸಿ ಶಾಸಕ ಸುನೀಲ್ ಕುಮಾರ್ ಜನತೆಗೆ ನಂಬಿಕೆ ದ್ರೋಹವೆಸಗಿದ್ದಾರೆ. ಹೀಗಾಗಿ ಬೃಹತ್ ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಸೋಮವಾರ ಬೆಳಿಗ್ಗೆ 10:30 ಥೀಮ್ ಪಾರ್ಕಿನ ತಪ್ಪಲಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು.
ಪ್ರತಿಭಟನೆಯ ಅಂಗವಾಗಿ ಬೆಳಿಗ್ಗೆ 10 ಘಂಟೆ ಪ್ರತಿಭಟನಕಾರರು ಕಾರ್ಕಳ ಪುಲ್ಕೇರಿ ಬೈಪಾನ್ ವೃತ್ತದಿಂದ ಒಟ್ಟಾಗಿ ವಾಹನದಲ್ಲಿ ತೆರಳಿ ಬೆಟ್ಟದ ತಪ್ಪಲನ್ನು ತಲುಪಲ್ಲಿದ್ದಾರೆ.