ಮೈಸೂರು :ಅಕ್ಟೋಬರ್ 15:ದ್ರಶ್ಯ ನ್ಯೂಸ್ ಚಾಮುಂಡಿಬೆಟ್ಟದ ದೇವಿ ಸನ್ನಿಧಿಯಲ್ಲಿ ಬೆಳಗ್ಗೆ 10:15ರಿಂದ 10:36ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಜತೆಗಿದ್ದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾನು ಇಂದು ಹಚ್ಚಿದ್ದು ಕನ್ನಡದ ದೀಪ, ಹಚ್ಚಿದ್ದು ಕೇವಲ ನನ್ನ ಕೈ, ಆದರೆ ಇದಕ್ಕೆ ಚೈತ್ಯನ್ಯ ನೀಡಿದ್ದು ಈ ನಾಡಿನ ಹಿರಿಯರದ್ದು ಅವರ ಅಶಯದ್ದು ಆಗಿದೆ ಅಂತ ತಿಳಿಸಿದರು. ದಸರಾ ಎನ್ನುವುದು ಜೀವಂತ ಮಹಾಕಾವ್ಯವಾಗಿದ್ದು, ದ.ಭಾರತದ ವೀರ ಕಥೆಯೇ ಇದಾಗಿದೆ ಅಂತ ಹೇಳಿದ ಅವರು, ಮೂರು ಮುಕ್ಕಾಲು ಗಳಿಗೆ ಚಿನ್ನದ ಮಳೆ ಸುರಿಸಿದ ರಾಜ್ಯ ವಿಜಯನಗರವಾಗಿದೆ ಅಂತ ಅವರು ಹೇಳಿದರು. ಶಾಂತಿ ಮಂತ್ರ ಕನ್ನಡವಾಗಿದ್ದು, ಕರ್ನಾಟಕದಲ್ಲಿ ವಾಸ ಮಾಡುತ್ತಿರುವವರು ಎಲ್ಲರೂ ಕೂಡ ಕನ್ನಡಿಗರೇ ಅಂತ ಅವರು ಹೇಳಿದರು
ಈ ಸಂಧರ್ಭ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ,ವ ಸದಸ್ಯ ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿ.ಪಂ. ಸಿಇಓ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.