ಮಡಿಕೇರಿ: ಅಕ್ಟೋಬರ್: 16: ದೃಶ್ಯ ನ್ಯೂಸ್ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.
ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.
ಇನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ & ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಎ.ಕಾಳನ ರವಿ ಮೊದಲಾದವರು ಭಾಗವಹಿಸಲಿದ್ದಾರೆ.