ಮೈಸೂರು: ಇನ್ನು ಮುಂದೆ ರೈತರ ಪಂಪ್ಸೆಟ್ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು,ರಾಜ್ಯದಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಇದೆ ಎಂದು ಸಿಎಂ . ಮೈಸೂರಿನಲ್ಲಿ ತಿಳಿಸಿದರು. .
ಕುಮಾರಸ್ವಾಮಿ ಹಾಗೂ ಬಿಜೆಪಿಯ ಆಡಳಿತವಿದ್ದಾಗ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಇರಲಿಲ್ಲ. ಹಾಗಾಗಿ ಈಗ ವಿದ್ಯುತ್ ಪೂರೈಕೆ ಸಮಸ್ಯೆ ಎದುರಾಗಿದೆ. ರಾಜ್ಯದ ಹೊರಗಡೆ ವಿದ್ಯುತ್ ಖರೀದಿಸಲಾಗುವುದು. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ” ಎಂದರು