ಬೈಂದೂರು : ಅಕ್ಟೋಬರ್: 16: ದೃಶ್ಯ ನ್ಯೂಸ್ : ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಸುವರ್ಣ ಮಹೋತ್ಸವ ಶಾರದೋತ್ಸವ ಅಂಗವಾಗಿ ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್ ರಾಜು ಪೂಜಾರಿ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡಾ ಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ ಎಂದರು.
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಸುವರ್ಣ ಮಹೋತ್ಸವ ಶಾರದೋತ್ಸವ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾನಿಧ್ಯದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿದರು.
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಮಾಜಿ ಅಧ್ಯಕ್ಷರಾದ ಗಿರೀಶ್ ಬೈಂದೂರು, ಬಿ.ಎಮ್. ನಾಗರಾಜ್ ಗಾಣಿಗ, ಶಾರದೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ ಬೈಂದೂರು, ಬೈಂದೂರು ತಾಲೂಕು ಯುವ ಜನ ಕ್ರೀಡಾ ಇಲಾಖೆಯ ಯೋಜನಾಧಿಕಾರಿ ಪ್ರಭಾಕರ್ ಎಸ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಯಾನಂದ ಪಿ ಸ್ವಾಗತಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.