ಉಡುಪಿ :ಅಕ್ಟೋಬರ್ 16:ದ್ರಶ್ಯ ನ್ಯೂಸ್ :ಬೆಂಗಳೂರಿನಲ್ಲಿ ಅಕ್ಟೋಬರ್ 15ರಂದು ಅಕ್ಷಯಪಾತ್ರ ಮಾನವ ಫೌಂಡೇಶನ್ ವತಿಯಿಂದ ಜರುಗಿದ ಕಾರ್ಯಕ್ರಮದಲ್ಲಿ ಡಾ.ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿಗೆ ಕರಾವಳಿ ಭಾಗದ ಉಡುಪಿ ಜಿಲ್ಲೆಯ ಆಪದ್ಭಾಂಧವ, ಈಜು ತಜ್ಞ, ಜೀವರಕ್ಷಕ ಈಶ್ವರ್ ಮಲ್ಪೆ ಯವರನ್ನು ಗುರುತಿಸಿ ಗೌರವಿಸಿ ಪ್ರಶಸ್ತಿ ನೀಡಲಾಯಿತು.
ಈ ಪ್ರಶಸ್ತಿಯನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಈಜು ತಜ್ಞ ಸಮಾಜ ಸೇವಕ ಈಶ್ವರ ಮಲ್ಪೆ ಇವರಿಗೆ ಪ್ರಶಸ್ತಿ ನೀಡಿದ್ದಾರೆ, ಈ ಕಾರ್ಯಕ್ರಮದಲ್ಲಿ ದಿ ಗ್ರೇಟ್ ಕಲಿ, ಮಹಿಮಾ ಚೌದ್ರಿ, ಬಾಲಿವುಡ್ ಸಿಂಗರ್ ಜಾವೇದ್ ಅಲಿ, ಮಿಸ್ ಇಂಡಿಯಾ ಸಿಮ್ರಾನ್ ಅಹುಜಾ,ನಟ ಶಿವರಾಜ್ ಕುಮಾರ್ ಸಹಿತ ಅನೇಕ ಗಣ್ಯ ವ್ಯಕ್ತಿಗಳು ಈ ಪ್ರಶಸ್ತಿ ಸಮಾರಂಭದಲ್ಲಿ ಹಾಜರಿದ್ದರು.