ಬೆಂಗಳೂರು : ನಟ ದಿ. ಪುನೀತ್ ರಾಜ್ ಕುಮಾರ್ ಅವರ ಜನ್ಮದಿನ ಮಾರ್ಚ್ 17 ನ್ನು ಸ್ಪೂರ್ತಿ ದಿನವಾಗಿ ಆಚರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪುನೀತ್ ರಾಜ್ ಕುಮಾರ್ ಡಿಜಿಟಲ್ ಪುತ್ಥಳಿಗಳ ಅನಾವರಣ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನಗೆ ಡಾ.ರಾಜ್ ಕುಮಾರ್ ಕುಟುಂಬದ ಜೊತೆಗೆ ಬಹಳ ಹಿಂದಿನಿಂದಲೂ ಒಡನಾಟು ಇತ್ತು. ಪುನೀತ್ ನನಗೆ ನೀಡುತ್ತಿದ್ದಷ್ಟು ಗೌರವವನ್ನು ಮನೆಯವರೂ ನೀಡುತ್ತಿರಲಿಲ್ಲ ಎಂದರು.
ಮಾರ್ಚ್ 17 ಪುನೀತ್ ರಾಜ್ ಕುಮಾರ್ ಜನ್ಮದಿನವನ್ನು ಸ್ಪೂರ್ತಿ ದಿನವಾಗಿ ಆಚರಿಸುವ ನಿರ್ಧಾರವನ್ನು ಹಿಂದಿನ ಸರ್ಕಾರ ಕೈಗೊಳ್ಳದಿದ್ದರೂ ನಾವು ಮಾಡುತ್ತೇವೆ. ಅಶ್ವಿನಿ ರಾಜ್ ಕುಮಾರ್ ಅವರ ಮನವಿಯಂತೆ ಡಾ.ರಾಜ್ ಕುಮಾರ ಸ್ಮಾರಕ ಪುನರಾಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಹೇಳಿದ್ದಾರೆ.