ಕಾರ್ಕಳ : ಅಕ್ಟೋಬರ್ 17:ದ್ರಶ್ಯ ನ್ಯೂಸ್ :ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ,ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದಳು.ಎನ್ನಲಾಗಿದೆ
ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ