ಉಡುಪಿ :ಅಕ್ಟೋಬರ್ 20:ದ್ರಶ್ಯ ನ್ಯೂಸ್ :ಸರಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿ -2022ರ ನೇಮಕಾತಿಗೆ ಸಂಬಂಧಿಸಿದಂತೆ 2023ರ ಮಾರ್ಚ್ ೮ರಂದು ಪ್ರಕಟಿಸಲಾದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್-https:schooleducation.karnataka.gov.in-ನಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಅಕ್ಟೋಬರ್ 21ರಂದು ಬೆಳಗ್ಗೆ ೧೦:೩೦ಕ್ಕೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ವಿಭಾಗ) ಇಲ್ಲಿನ ಸವ್ಯಸಾಚಿ ಸಭಾಭವನದಲ್ಲಿ ಕೌನ್ಸಲಿಂಗ್ ನಡೆಯಲಿದ್ದು, ಆಯ್ಕೆ ಗೊಂಡ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಪಟ್ಟ ಅಗತ್ಯ ದಾಖಲೆ ಹಾಗೂ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಹಾಜರಾಗಬಹುದು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಉಡುಪಿ ದೂ.ಸಂಖ್ಯೆ:0820-2574878ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.