ಬೆಂಗಳೂರು :ಅಕ್ಟೋಬರ್ 20:ದ್ರಶ್ಯ ನ್ಯೂಸ್ :ಮನೆಯ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ 2 ಸಾವಿರ ರೂ. ನೀಡುತ್ತಿದ್ದು, ಈ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಚಿವ ಹೆಚ್.ಕೆ. ಪಾಟೀಲ್ ಅವರು ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆ ವಿಸ್ತರಣೆ ಮಾಡಲಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆ ವಿಸ್ತರಣೆ ಮಾಡುವ ಆದೇಶಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.