ಉಡುಪಿ : ಜಿಲ್ಲಾಡಳಿತ, ತಾಲೂಕು ಪಂಚಾಯತ್ ಉಡುಪಿ, ಉಡುಪಿ ನಗರ ಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನನ್ನ ಮಣ್ಣು ನನ್ನ ದೇಶ ಉಡುಪಿ ತಾಲೂಕು ಮಟ್ಟದ ಕಲಶ ಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿತ್ತು
ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಮಾತನಾಡಿದರು. ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಮಮತಾ ದೇವಿ, ಪೌರಾಯುಕ್ತರಾದ ಶ್ರೀ ರಾಯಪ್ಪ, ತಹಶೀಲ್ದಾರ್ ಶ್ರೀ ಭೀಮ್ ಸೇನ್, ನಗರ ಸಭೆ ಸದಸ್ಯರಾದ ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀ ಚಂದ್ರ ಶೇಖರ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಜಯಾ, ಇಲಾಖೆಯ ಅಧಿಕಾರಿಗಳಾದ ಡಾ. ರೋಷನ್ ಕುಮಾರ್ ಶೆಟ್ಟಿ, ಶ್ರೀಮತಿ ಪೂರ್ಣಿಮಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.