ಉಡುಪಿ, ಅಕ್ಟೋಬರ್ 20: ದೃಶ್ಯ ನ್ಯೂಸ್ : ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಅಕ್ಟೋಬರ್ 21 ರಂದು ಬೆಳಗ್ಗೆ 8 ಗಂಟೆಗೆ ನಗರದ ಚಂದು ಮೈದಾನ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕೇಂದ್ರ ಸ್ಥಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ್ ಶಿವಪ್ಪ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಹೆಚ್, ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಗಣಪತಿ, ಕಾರ್ಕಳ ನಕ್ಸಲ್ ನಿಗ್ರಹ ದಳದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಅಂಷು ಕುಮಾರ್, ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ್ ಎಂ ನಾಯಕ್ ಮೊದಲಾದವರು ಭಾಗವಹಿಸಲಿದ್ದಾರೆ.