ಶಿರ್ವ : ಅ.20: ದೃಶ್ಯ ನ್ಯೂಸ್ : ವಿದ್ಯಾವರ್ಧಕ ಕ್ಯಾಂಪಸ್ ಶಿರ್ವ ಇಲ್ಲಿ ನಿರ್ಮಿಸಿರುವ “ಜಸ್ಟಿಸ್ ಕೆ.ಎಸ್ ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರ” ಇದರ ಉದ್ಘಾಟನಾ ಸಮಾರಂಭ ಇಂದು ನಡೆಯಿತು.
ಜಸ್ಟಿಸ್ ಕೆ.ಎಸ್ ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರವನ್ನು ನ್ಯಾಯಮೂರ್ತಿಗಳು ನಿವೃತ್ತ ಲೋಕಾಯುಕ್ತರಾದ ಎನ್. ಸಂತೋಷ್ ಹೆಗ್ಡೆ ಅವರು ನೆರವೇರಿಸಿದರು.
ನಿಟ್ಟೆ ವಿಶ್ವವಿದ್ಯಾನಿಲಯ ಕುಲಾಧಿಪತಿಗಳಾಗಿ, ನಿಟ್ಟೆ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷರಾಗಿ ಯಶಸ್ವಿ ಕೈಗಾರಿಕೋದ್ಯಮಿಯಾಗಿ, ಶಿರ್ವ ವಿಧ್ಯಾವರ್ಧಕ ಸಂಘ ಅಧ್ಯಕ್ಷರಾಗಿ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕಳೆದ ಆರು ದಶಕಗಳಿಂದ ಅನುಪಮ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಾವಿರಾರು ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಿ ದೂರದೃಷ್ಟಿಯ ದೃಷ್ಟಾರಾಗಿರುವ “ನಿಟ್ಟೆ ವಿನಯ್ ಹೆಗ್ಡೆ” ಇವರಿಗೆ ಶಿರ್ವ ವಿಧ್ಯಾವರ್ಧಕ ಸಂಘದ ವತಿಯಿಂದ “ವಿನಯಾಭಿವಂಧನೆ ವಿದ್ಯಾವಿನಯಭೂಷಣ ಪ್ರಶಸ್ತಿ ಪ್ರಧಾನ” ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಶಾಸಕರು ಹಾಗೂ ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಪ್ರೊ. ಡಾ. ಎಂ. ಶಾಂತಾರಾಮ್ ಶೆಟ್ಟಿ, ಸಹ ಕುಲಾಧಿಪತಿಗಳಾದ ಡಾ. ಎಂ.ಎಸ್ ಮೂಡಿತ್ತಾಯ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ರಾಜೇಶ್, ಹಾಗೂ ವಿದ್ಯಾವರ್ಧಕ ಸಂಘ (ರಿ.) ಶಿರ್ವ ಇದರ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ವೃಂದ, ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.